ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ

Letest Post ಬೆಳಗಾವಿ

    ಬೆಳಗಾವಿ: ರಾಜ್ಯದೆಲ್ಲೆಡೆ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಲಸಿಕೆಯ ಅಭಿಯಾನಕ್ಕೆ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚಾಲನೆ ನೀಡಿದರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು.

    ಈ ವೇಳೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಮೇಶ ದಂಡಗಿ, ಪಲ್ಸ್ ಪೋಲಿಯೊ ನೊಡೆಲ್ ಅಧಿಕಾರಿ ಡಾ. ಸಂಜಯ ಡುಮ್ಮಗೋಳ, ಜಿಲ್ಲಾ ಆಯುಷ್ಯ ಅಧಿಕಾರಿ ಶ್ರೀಕಾಂತ ಸುಣಧೋಳಿ, ಡಾ.ಪವನ್ ಗಲಗಲಿ, ಅಂಗನವಾಡಿಯ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು ಮುಂತಾದವರು ಉಪಸ್ಥಿತರಿದ್ದರು.

    Leave a Reply

    Your email address will not be published. Required fields are marked *